ಸರ್ಕಾರ ವಿರುದ್ಧ ಗುಡುಗಿದ್ದ ಕಿರಣ್ ಶಾರಿಂದ ಸಿಎಂ, ಡಿಸಿಎಂ ಭೇಟಿಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆ, ಮೂಲಸೌಕರ್ಯ ವಿಚಾರಕ್ಕೆ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.