ಗೆಲ್ಲಲೆಂದೇ ವಿಪ ಚುನಾವಣೆಗೆ ಸ್ಪರ್ಧೆ: ರಘುಪತಿ ಭಟ್ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸತತ 3 ಬಾರಿ ಶಾಸಕನಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಾತಿ ಕಾರಣಕ್ಕಾಗಿ ನನಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ನೈರುತ್ಯ ಪದವೀಧರರ ಕ್ಷೇತ್ರ ಟಿಕೆಟ್ ನೀಡುವುದಾಗಿ ಹೇಳಿ, ಟಿಕೆಟ್ ನೀಡಿಲ್ಲ. ಆದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಟಿ.ರಘುಪತಿ ಭಟ್ ಹೇಳಿದ್ದಾರೆ.