ಪದವೀಧರ, ಶಿಕ್ಷಕರ ಸಮಸ್ಯೆಗಳಿಗೆ ಬಿಜೆಪಿ ಸ್ಪಂದನೆ: ಎಂಎಲ್‌ಸಿ ಭಾರತಿ ಶೆಟ್ಟಿ ಡಾ.ಧನಂಜಯ ಸರ್ಜಿ ಕೋವಿಡ್ ಸಂದರ್ಭದಲ್ಲಿ ಅನೇಕ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾಜ ಸೇವೆ ಜೊತೆಯಲ್ಲಿ ವೈದ್ಯಕೀಯ ಸೇವೆಯಲ್ಲಿರುವ ಡಾ.ಸರ್ಜಿ ಸೂಕ್ತ ಅಭ್ಯರ್ಥಿಯಾಗಿದ್ದು, ಈ ನಿಟ್ಟಿನಲ್ಲಿ ಪದವೀಧರರು ಅವರ ಬೆಂಬಲಿಸಬೇಕು. ಸಂಘ-ಪರಿವಾರದ ಹಿನ್ನೆಲೆಯಿಂದ ಬಂದ ಸರ್ಜಿ ಅನೇಕ ಜವಾಬ್ದಾರಿಗಳ ನಿರ್ವಹಿಸಿದ್ದಾರೆ. ವೈದ್ಯಕೀಯ ಶಿಕ್ಷಣದ ಅವಧಿಯಲ್ಲೂ ಸಂಘದ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸಿದ್ದಾರೆ.