ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ತನ್ಮೂಲಕ ಈ ಬಗ್ಗೆ ಉಂಟಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವೇ ನಿವಾರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರ ಬಹಳ ಪವಿತ್ರವಾದುದು. ಇಲ್ಲಿಗೆ ಶಿಕ್ಷಕರು, ಮಕ್ಕಳು ಶಿಸ್ತಿನಿಂದ ಬರಬೇಕು ಎನ್ನುತ್ತೇವೆ. ಆದ್ದರಿಂದ ಶಿಕ್ಷಣ ಸಚಿವರೂ ನೀಟ್ ಆಗಿ, ಶಿಸ್ತಿನಿಂದ ಇರಬೇಕು ಎಂದು ಮಕ್ಕಳ ಪೋಷಕರು ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ಪದವಿ ವ್ಯಾಸಂಗವನ್ನು ಮೂರು ವರ್ಷಕ್ಕೆ ನಿಗದಿಪಡಿಸುವ ಜೊತೆಗೆ ಆಯಾ ವಿಶ್ವವಿದ್ಯಾಲಯಗಳ ಮಟ್ಟದಲ್ಲೇ ಪಠ್ಯಕ್ರಮ ಪರಿಷ್ಕರಣೆಗೆ ಆದೇಶ
2024-25ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್ ಆಗಿದ್ದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರ ಬುಧವಾರದಿಂದ ಮತ್ತೆ ಬಾಗಿಲು ತೆರೆಯಲಿವೆ.
ಸಂಸದ ಪ್ರಜ್ವಲ್ ರೇವಣ್ಣಗೆ ವಾಪಸ್ ಬರುವಂತೆ ದೇವೇಗೌಡರು ಎಚ್ಚರಿಕೆ ಕೊಟ್ಟಿದ್ದರು. ನಾನೂ ಎಚ್ಚರಿಕೆ ಕೊಟ್ಟಿದ್ದೇನೆ. ಈಗ ವಿಡಿಯೋ ಮಾಡಿ ಮೇ 31ಕ್ಕೆ ವಾಪಸ್ ಬರುವುದಾಗಿ ಹೇಳಿರುವುದು ಸಮಾಧಾನ ತಂದಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.