ಅಡಕೆ ವ್ಯಾಪಾರಿ ಮನೆ ದರೋಡೆ ಪ್ರಕರಣ: ಮೂವರ ಸೆರೆ2020 ಜೂ. 6ರಂದು ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ನಿವಾಸಿ ಅಚ್ಯುತ ಭಟ್ ಎಂಬವರ ಮನೆಗೆ ನುಗ್ಗಿದ ದರೋಡೆಕೋರರು ಮನೆಯಲ್ಲಿದ್ದ ಅಚ್ಯುತ ಭಟ್, ಅವರ ತಾಯಿ ಹಾಗೂ ತಮ್ಮನ ಪತ್ನಿಯನ್ನು ಕಟ್ಟಿ ಮನೆಯಲ್ಲಿದ್ದ ನಗ-ನಗದು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಪೈಕಿ ಮೂವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.