ನಗರದಲ್ಲಿ 12 ಸಾವಿರ ರಸ್ತೆ ಗುಂಡಿಗಳಿದ್ದು, ಅದರಲ್ಲಿ 7 ಸಾವಿರಕ್ಕೂ ಹೆಚ್ಚಿನ ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ 5 ಸಾವಿರ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
46 ಹಿಂದೂ ಜಾತಿಗಳ ಹೆಸರನ್ನು ಕ್ರಿಶ್ಚಿಯನ್ ಜತೆ ತಳಕುಹಾಕಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಆನ್‌ಲೈನ್ ಸಮೀಕ್ಷಾ ನಮೂನೆಯಿಂದ 33 ಜಾತಿಗಳ ಹೆಸರು ಕೈಬಿಡಲು ಹಿಂದುಳಿದ ವರ್ಗಗಳ ಆಯೋಗ ನಿರ್ಧರಿಸಿದೆ.
ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿ ದರ ಇಳಿಸಿರುವ ಹಿನ್ನೆಲೆಯಲ್ಲಿ ದಸರಾ ಹಬ್ಬಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿರುವ ಕೆಎಂಎಫ್, ಮೊಸರು ಹೊರತುಪಡಿಸಿ ಹಾಲಿನ ಉತ್ಪನ್ನಗಳಾದ ಬೆಣ್ಣೆ, ತುಪ್ಪ, ಚೀಸ್ ಸೇರಿ ಇತರೆ ಉತ್ಪನ್ನಗಳ ಮಾರಾಟ ದರ ಪರಿಷ್ಕರಿಸಿದೆ.