ಬಿತ್ತನೆ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಬೇಡಿಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಭೂಮಿ ಹದ ಮಾಡಿಕೊಂಡು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ರೈತರಿಗೆ ಕೃತಕ ಅಭಾವ ಸೃಷ್ಟಿಯಾಗದಂತೆ ಬಿತ್ತನೆಬೀಜ, ರಸಗೊಬ್ಬರ ಸಮರ್ಪಕ ವಿತರಣೆ ಮಾಡಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಸೂಚಿಸಿದರು.