ಡಾ.ಪ್ರಭಾ ಗೆಲುವಿಗೆ ಪ್ರಾರ್ಥಿಸಿ 101 ಕಾಯಿ ಹರಕೆಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸುವರೆಂಬ ಸಮೀಕ್ಷೆಗಳು, ಸಂದೇಶ ಜನರಿಂದ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಕೊಟ್ಟೂರು ಸುಕ್ಷೇತ್ರದಲ್ಲಿ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನ ಕಾಯಿ ಒಡೆಯುವ ಮೂಲಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹರಕೆ ಮಾಡಿಕೊಂಡರು.