ರೈತರಿಗೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಕ್ರಮವಹಿಸಿ: ಸಿಎಂ ರಾಜ್ಯದಲ್ಲಿ 2312 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಕಂಡು ಬಂದಿದ್ದು, ಅದರಲ್ಲಿ 1700 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ, 500 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ, ಉಳಿದ ಗ್ರಾಮಗಳಲ್ಲಿ ಹಳೆಯ ಕೊಳವೆ ಬಾವಿ ನವೀಕರಣ ಹಾಗೂ ಹೊಸ ಕೊಳವೆ ಬಾವಿ ಕೊರಸುವ ಮೂಲಕ ಸಮರ್ಪಕವಾಗಿ ಪರಿಹರಿಸಲಾಗಿದೆ. ರಾಜ್ಯಾದ್ಯಂತ ಅಗತ್ಯವಿರುವ ಕಡೆ ಮೇವಿನ ಬ್ಯಾಂಕ್‌ಗಳನ್ನು ಸ್ಥಾಪಿಸಿ ರೈತರ ಕಷ್ಟಕ್ಕೆ ಸ್ಪಂದಿಸಲಾಗಿದೆ.