ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಎಲ್ಲರನ್ನೂ ಎದ್ದು ನಿಲ್ಲಿಸಿ ಚಪ್ಪಾಳೆ ಹಾಕಿಸಿದ ಪ್ರಸಂಗ ನಡೆಯಿತು.
ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗಗಳಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ಇದೇ ತಿಂಗಳ 24ರಂದು ರಾಜ್ಯಾದ್ಯಂತ ರಸ್ತೆತಡೆ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎರಡು ಜನ್ಮ ತಾಳಿದರೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ, ಬಿಡದಿ ಟೌನ್ ಶಿಪ್ ಸೇರಿದಂತೆ ಯಾವುದೇ ಯೋಜನೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದರು.
ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್‌ನ ಪ್ರಮುಖ ಆರೋಪಿ ಚಿನ್ನಯ್ಯ, ತನ್ನ ಪತ್ನಿ ಜೊತೆ ಎರಡು ವರ್ಷದ ಹಿಂದೆ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದ್ದ.
ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಾಲಯ, ಮೇಲು ಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ, ಸೌತಡ್ಕ ಮಹಾಗಣತಿ ದೇವಾಲಯ, ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಾಲಯ ಸೇರಿ ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ 14 ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ
ಮುಂದೂಡಲ್ಪಟ್ಟಿದ್ದ ಸರ್ಕಾರಿ ಶಾಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರ ವರ್ಗಾವಣೆ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಶುಕ್ರವಾರದಿಂದಲೇ ಚಾಲನೆ ದೊರಕಿದೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ವೀರಶೈವ-ಲಿಂಗಾಯತ ಏಕತಾ ಸಮಾವೇಶ’ದಲ್ಲಿ ಪಂಚಪೀಠಾಧಿಶ್ವರರ ಆದಿಯಾಗಿ ಸಾವಿರಾರು ಗುರು-ವಿರಕ್ತ ಸ್ವಾಮೀಜಿಗಳು ಪಾಲ್ಗೊಂಡು ನಾವೇಲ್ಲರೂ ಒಂದು ಎಂದು ಒಗ್ಗಟ್ಟು ಪ್ರದರ್ಶಿಸಿದರು.
ಸಮೀಕ್ಷೆ ವೇಳೆ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಹೀಗೆ 46 ಜಾತಿಗಳನ್ನು ಕ್ರಿಶ್ಚಿಯನ್ ಜತೆ ತಳಕುಹಾಕಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಯನ್ನು ಕೈಬಿಡಬೇಕೇ ಅಥವಾ ಮುಂದುವರೆಸಬೇಕೇ ಎಂಬ ಕುರಿತು ಸರ್ಕಾರ ಹಾಗೂ ಹಿಂದುಳಿದ ವರ್ಗಗಳ ಆಯೋಗದ ನಡುವೆ ಒಮ್ಮತ ಅಭಿಪ್ರಾಯ ಮೂಡಿಲ್ಲ.