ವಿದ್ಯಾರ್ಥಿಗಳಲ್ಲಿ ಗುರಿ ಸಾಧನೆಯ ಛಲವಿರಲಿ: ನಂದಿನಿವಿದ್ಯಾರ್ಥಿಗಳು ಉತ್ತಮ ಗುರಿ ಇಟ್ಟುಕೊಳ್ಳಬೇಕು. ಆ ಗುರಿ ಸಾಧನೆಗೆ ಛಲ ಹೊಂದಿರಬೇಕು. ತರಗತಿಯಲ್ಲಿ ಏಕಾಗ್ರತೆ ಕಾಯ್ದುಕೊಂಡು ಶಿಕ್ಷಕರ ಪಾಠ ಆಲಿಸಬೇಕು. ನಮ್ಮ ನಡೆ, ನುಡಿ ಎಲ್ಲವೂ ವಿದ್ಯಾರ್ಥಿಗಳ ಬೆಳವಣಿಗೆಗೆ ಪರಿಗಣನೆ ಆಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮಿಸಿದರೆ ಉತ್ತಮ ಜ್ಞಾನದೊಂದಿಗೆ ಅಂಕಗಳಿಸಿ ಸಮಾಜದಲ್ಲಿ ಉನ್ನತ ಸ್ಥಾನ ಮಾನಗಳಿಸಲು ಸಾಧ್ಯ ಆಗುತ್ತದೆ.