ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳಿವಿದ್ಯಾರ್ಥಿಗಳು ವಿದ್ಯಾಭ್ಯಾಸದ ದಿನಗಳಲ್ಲಿ ನಿರಂತರ ಶ್ರದ್ಧೆ, ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳುವಂತೆ ಶ್ರೀ ಮುರುಘಾಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ಕರೆ ನೀಡಿದರು. ಚಿತ್ರದುರ್ಗದ ಚಂದ್ರವಳ್ಳಿಯ ಎಸ್‌ಜೆಎಂ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ಗ್ರಾಮ ಸ್ವರಾಜ್ಯ ವಿಷಯ ಕುರಿತ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.