ಮಂಡ್ಯ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಚುರುಕುಮಾರ್ಚ್, ಏಪ್ರಿಲ್‌ನಲ್ಲೇ ಕಾಣಿಸಿಕೊಳ್ಳಬೇಕಿದ್ದ ಪೂರ್ವ ಮುಂಗಾರು ಮೇ ೪ ರಿಂದ ಶುರುವಾಯಿತು. ಆರಂಭದಲ್ಲಿ ಮಂದಗತಿಯಿಂದ ಶುರುವಾದ ಮಳೆ ನಂತರದಲ್ಲಿ ಬಿರುಸನ್ನು ಪಡೆದುಕೊಂಡಿದೆ. ಕಳೆದ ಹದಿನೈದು ದಿನಗಳಿಂದ ಎಲ್ಲೆಡೆ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ತೋಟ, ಜಮೀನುಗಳಿಗೆ ಹೊಸ ಮಣ್ಣನ್ನು ತುಂಬಿಸಿಕೊಂಡಿರುವ ರೈತರು ಕೃಷಿ ಚಟುವಟಿಕೆಗೆ ಭೂಮಿಯನ್ನು ಹದಗೊಳಿಸಿಕೊಳ್ಳುತ್ತಿದ್ದಾರೆ.