ರಾಜ್ಯ ಸರ್ಕಾರದ ವಿರುದ್ಧ ರೈತಸಂಘದಿಂದ ಪ್ರತಿಭಟನೆರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಅಮಾನುಷ ವರ್ತನೆ ತೋರಿರುವ ಬೆಳಗಾವಿಯ ಎಸ್ಪಿ ಭೀಮಾ ಶಂಕರ.ಎಸ್.ಗುಳೇದ್ ರನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆಗ್ರಹಿಸಿದರು.