ಕೆಜಿಎಫ್ ಠಾಣೆಗಳಲ್ಲಿ ಲೋಕಸ್ಪಂಧನ ಕ್ಯೂ ಆರ್ ಕೋಡ್ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯನ್ನಾಗಿಸುವ ಉದ್ದೇಶದಿಂದ ಕೆಜಿಎಫ್ ಪೊಲೀಸ್, ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ನೂತನವಾಗಿ ಲೋಕಸ್ಪಂದನ ಕ್ಯೂ ಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಸ್ಪಂದನ ಕ್ಯೂ ಆರ್ ಕೋಡ್ ಸ್ಕ್ಯಾನ್ ಬೋರ್ಡ್‌ಗಳನ್ನು ಇಡಲಾಗಿದೆ. ಪೊಲೀಸ್ ಠಾಣೆಗೆ ಭೇಟಿ ನೀಡುವಂತಹ ದೂರುದಾರರು ಅಥವಾ ಅರ್ಜಿದಾರರು ಠಾಣಾಧಿಕಾರಿಗಳು, ಅಲ್ಲಿನ ಠಾಣಾ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ನಡೆದುಕೊಳ್ಳುವ ಸೌಹಾರ್ದತೆ, ಸೌಜನ್ಯದ ಕುರಿತು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ, ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ.