ಪೋಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ಸಹಕಾರದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚಾರಣೆ ಕಾರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಿಎಸ್ ಐ ವಸಂತ್ ಕುಮಾರ್ ,ಶಾಲಾ ಕಾಲೇಜುಗಳು ನಿಮ್ಮ ಭವಿಷ್ಯ ರೂಪಿಸುವ ಕೇಂದ್ರವಾಗಿದ್ದು, ಹದಿಹರೆಯ ವಯಸ್ಸಿನಲ್ಲಿ ಪ್ರೀತಿ, ಪ್ರೇಮ ಎಂಬ ಬಲೆಗೆ ಬೀಳದೆ ಭವಿಷ್ಯ ರೂಪಿಸಿಕೊಳ್ಳುವ ಕಡೆ ನಿಮ್ಮ ಗಮನ ಇರಲಿ ಎಂದು ಹೇಳಿದರು.