ಮೃದು ಹಿಂದುತ್ವ ಧೋರಣೆ ಸಚಿವ ಎಚ್‌ಕೆಗೆ ಮಾರಕಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರು ಗ್ರಾಮೀಣಾಭಿವೃದ್ಧಿ ವಿವಿಯಲ್ಲಿ ಕೋಮುವಾದ ಬಿತ್ತುತ್ತಿರುವ ಕುಲಪತಿ ಸೇರಿದಂತೆ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳದೇ ಮೃದು ಹಿಂದುತ್ವ ಧೋರಣೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಬಂಡಾಯ ಸಾಹಿತಿ ಬಸವರಾಜ ಸೂಳಿಭಾವಿ ಗದಗದಲ್ಲಿ ಹೇಳಿದರು.