ಕುಡಿಯುವ ನೀರಿನ ಸಮಸ್ಯೆ, ಮೇವಿನ ದಾಸ್ತಾನಿನ ವಸ್ತುಸ್ಥಿತಿ ವರದಿ ಕೊಡಿಬರ ನಿರ್ವಹಣೆ ಕುರಿತಂತೆ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸ್ಥಿತಿಗತಿಗಳ ಕುರಿತಂತೆ ಗ್ರಾಮವಾರು ಮಾಹಿತಿ ಸಂಗ್ರಹಿಸಲು ನೇಮಕಗೊಂಡ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳು ಗ್ರಾಮವಾರು ವಸ್ತುಸ್ಥಿತಿಯ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.