ಹಾಸ್ಟೆಲ್ ಹಂಚಿಕೆಯಲ್ಲಿ ತಾರತಮ್ಯಕ್ಕೆ ಆಕ್ರೋಶವಿದ್ಯಾರ್ಥಿಗಳ ಹಾಸ್ಟೆಲ್ ಹಂಚಿಕೆ ವಿಚಾರದಲ್ಲಿ ಸಾಕಷ್ಟು ತಾರತಮ್ಯ ನಡೆದಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದರು.