ಕೆಎಫ್‌ಡಿ ವ್ಯಾಕ್ಸಿನ್ ಕೊರತೆಯಿಂದ ಕಾಡಂಚಿನ ಜನರಲ್ಲಿ ಹೆಚ್ಚಿದ ಜೀವಭಯಹೊತ್ತಿಗೆ ಮುಂಚೆಯೇ ನೆರೆಯ ಜಿಲ್ಲೆ ಚಿಕ್ಕಮಗಳೂರಲ್ಲಿ ಈ ವರ್ಷದ ಮೊದಲ ಪ್ರಕರಣ ದಾಖಲಾಗಿದೆ. ಇದು ಈ ಆತಂಕ ಹೆಚ್ಚಲು ಕಾರಣವಾಗಿದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ ನವೆಂಬರ್‌ನಿಂದ ಮಳೆಗಾಲ ಆರಂಭ ಆಗುವವರೆಗೂ ಮಂಗನ ಕಾಯಿಲೆ ಪ್ರಕರಣ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಇದರ ಆರ್ಭಟ ಹೆಚ್ಚು. ಆದರೆ, ಕಳೆದೆರಡು ವರ್ಷದಿಂದ ಜನವರಿಯಲ್ಲಿ ಪ್ರಕರಣ ಕಾಣಿಸಿಕೊಳ್ಳುತ್ತಿದೆ. ಇದರ ನಡುವೆ ನವಂಬರ್ ಕೊನೆ ವಾರ ಅಥವಾ ಡಿಸೆಂಬರ್ ಮೊದಲಾರಂಭದಲ್ಲಿಯೇ ನೆರೆ ಜಿಲ್ಲೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಗೆ ಕೆಎಫ್‌ಡಿ ಪತ್ತೆ ಆಗಿರುವುದು ಇಲ್ಲಿಯ ಜನರಿಗೆ ಆತಂಕ ಉಂಟುಮಾಡುವಂತೆ ಮಾಡಿದೆ.