ವಿಪ ಚುನಾವಣೆಯಲ್ಲೂ ಆಮಿಷ ಬೇಸರ ಸಂಗತಿಲೋಕಸಭೆ ಚುನಾವಣೆ ಬೆನ್ನಲ್ಲೇ ವಿಧಾನ ಪರಿಷತ್ತಿಗೆ ಪದವೀಧರರು, ಶಿಕ್ಷಕರ ಕ್ಷೇತ್ರದಿಂದ ಚುನಾವಣೆ ಬಂದಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ರಾಜಕೀಯ ಪಕ್ಷವೊಂದರ ಅಭ್ಯರ್ಥಿ ಮತದಾರರಿಗೆ ಗಿಫ್ಟ್ ಬಾಕ್ಸ್ ನೀಡಲು ಸಂಗ್ರಹಿಸಿದ್ದ ಗಿಫ್ಟ್ ಬಾಕ್ಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಈ ಘಟನೆ ಬುದ್ಧಿವಂತರು, ನೀತಿವಂತರೇ ತುಂಬಿರುವ ಪರಿಷತ್ತಿಗೆ ನಡೆಯುವ ಚುನಾವಣೆ ಇಂದು ಎತ್ತಸಾಗಿದೆ ಎಂಬ ಪ್ರಶ್ನೆಯೊಂದಿಗೆ ಆತಂಕವನ್ನೂ ತಂದೊಡ್ಡಿದೆ ಎಂದು ವಿಧಾನ ಪರಿಷತ್ತು ಮಾಜಿ ಮುಖ್ಯ ಸಚೇತಕ, ಬಿಜೆಪಿ ಹಿರಿಯ ಮುಖಂಡ ಡಾ. ಎ.ಎಚ್. ಶಿವಯೋಗಿಸ್ವಾಮಿ ದಾವಣಗೆರೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.