ಮಡಿಕೇರಿ: ಮೇ 24ರಿಂದ ‘ಮಾವು ಮತ್ತು ಹಲಸಿನ ಮೇಳ’ಮಡಿಕೇರಿಯ ಕೊಡಗು ಜಿಲ್ಲಾ ಹಾಪ್‌ಕಾಮ್ಸ್ ಮುಖ್ಯ ಕಚೇರಿಯ ಆವರಣದಲ್ಲಿ ಮೇ ೨೪ರಿಂದ ಮೇ ೨೬ರ ತನಕ ಅತ್ಯಪರೂಪದ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣಿನ ಮೇಳ ನಡೆಯಲಿದೆ. ಬೆಳೆಗಾರರಿಗೆ ತಾವು ಬೆಳೆದ ಹಣ್ಣುಗಳ ಮಾರಾಟಕ್ಕೆ ಅನುವು ಮಾಡಿಕೊಡುವ ಮತ್ತು ವಿವಿಧ ತಳಿಯ, ವಿಭಿನ್ನ ರುಚಿಯ ಮಾವು ಹಲಸನ್ನು ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ.