ನನಗೆ ಜೀವ ಭಯವಿದೆ: ಶಂಭುಲಿಂಗನಗೌಡಕನ್ನಡಪ್ರಭ ವಾರ್ತೆ ಕೊಪ್ಪಳನನ್ನ ಕಾರು ಕಳ್ಳತನವಾಗಿದ್ದು, ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಮನೆ ಮುಂದಿನ ಕಾರು ಕದ್ದು ಒಯ್ದವರು ನನ್ನ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇದೆ. ಹೀಗಾಗಿ, ನನಗೆ ಜೀವ ಭಯವಿದೆ ಎಂದು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಿಗೇರಿ ಹೇಳಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಅಳಲು ತೊಡಿಕೊಂಡರು.