ರೈತರಿಗೆ ನೀಡಿರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ರಾಜ್ಯ ಸರ್ಕಾರ ತಾಕೀತು ಮಾಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ರಾಜ್ಯ ವಿಧಾನಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರು ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಒಟ್ಟು 103 ಅಭ್ಯರ್ಥಿಗಳಿಂದ 156 ಉಮೇದುವಾರಿಕೆ ಸಲ್ಲಿಕೆಯಾಗಿವೆ.
ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ವಿಚಾರಣೆಯನ್ನು ಮುಂದೂಡಿದೆ.
ಕಳೆದ ಬಾರಿ ಸುರಿದ ಅಲ್ಪ ಮಳೆಗೆ ಅರ್ಧಂಬರ್ಧ ಭರ್ತಿಯಾಗಿದ್ದ ಲಿಂಗನಮಕ್ಕಿ ಜಲಾಶಯದಲ್ಲಿ ಈಗ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಇದರ ಪರಿಣಾಮ ಶರಾವತಿ ಎಡದಂಡೆಯ ಸಿಗಂದೂರು ಲಾಂಚ್ ನಾಲ್ಕೈದು ದಿನಗಳಲ್ಲಿ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.
ಮಳೆ ಬೆನ್ನಲ್ಲೇ ಡೆಂಘೀ ಜ್ವರ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಸಾವಿರಾರು ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಅಲ್ಲದೆ ಡೆಂಘೀ ಪಾಸಿಟಿವಿಟಿ ದರ ಶೇ.21ಕ್ಕೆ ಏರಿಕೆಯಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ
ರಾಜಧಾನಿ ಬೆಂಗಳೂರಿನಲ್ಲಿ ಕೇವಲ ಎರಡು ವಾರದಲ್ಲಿ ಬರೋಬ್ಬರಿ 172ಕ್ಕೂ ಅಧಿಕ ಡೆಂಘೀ ಪ್ರಕರಣ ಪತ್ತೆ ಆಗಿರುವ ಹಿನ್ನೆಲೆಯಲ್ಲಿ ಹಾಗೂ ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಬಿಬಿಎಂಪಿ ಆರೋಗ್ಯ ವಿಭಾಗದಿಂದ ನಗರದಲ್ಲಿ ಜಾಗೃತಿ ಅಭಿಯಾನ ಆರಂಭಿಸಲಾಗಿದೆ.