ಬರಗಾಲ ಪರಿಹಾರ ಘೋಷಣೆಗೆ ಆಗ್ರಹ, ರೈತರ ಪ್ರತಿಭಟನೆಬರಗಾಲ ಪರಿಹಾರ ಘೋಷಣೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪುಟ್ಟಣ್ಣಯ್ಯ ಬಣ) ಕಾರ‍್ಯಕರ್ತರು ಬ್ಯಾಡಗಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿ, ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನ. 28ರೊಳಗೆ ಸರ್ಕಾರ ತನ್ನ ನಿರ್ಧಾರ ಪ್ರಕಟಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.