ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದೆ- ಬಿ. ಶ್ರೀರಾಮುಲುನಾನು ಕೂಡಾ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೆ. ಚುನಾವಣೆಯಲ್ಲಿ ಸೋತಿದ್ದೇನೆ ಅದಕ್ಕಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನಿಸುವ ಮಹದಾಸೆ ಇತ್ತು. ಆದರೆ ಅದು ಸಾಧ್ಯವಿಲ್ಲ ಎನ್ನುವುದು ಗೊತ್ತಾಯಿತು, ಅದಕ್ಕಾಗಿ ಸುಮ್ಮನಾದೆ ಎಂದು ಮಾಜಿ ಸಚಿವ, ಹಿರಿಯ ಬಿಜೆಪಿ ನಾಯಕ ಬಿ. ಶ್ರೀರಾಮುಲು ಹೇಳಿದರು.