ಬರ ಪರಿಹಾರದಲ್ಲಿ 2 ಸಾವಿರ ಕಡಿತ, ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ: ಬೊಮ್ಮಾಯಿಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ವಿತರಿಸುವಾಗ ರಾಜ್ಯ ಸರ್ಕಾರ ರೈತರಿಗೆ ಈ ಮೊದಲು ಕೊಟ್ಟಿದ್ದ ₹2 ಸಾವಿರ ಕಡಿತ ಮಾಡಿಕೊಂಡು ನೀಡುತ್ತಿದ್ದು, ಇದು ರೈತರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.