ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿಕನ್ನಡಪ್ರಭ ವಾರ್ತೆ ಗದಗಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಹೇಳಿದರು.ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ,ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪಾಲಕರು, ದೈಹಿಕ ಶಿಕ್ಷಣ ಶಿಕ್ಷಕರು ಗುರುತಿಸಿ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಭಾಗವಹಿಸಲು ಪ್ರೋತ್ಸಾಹ,ತರಬೇತಿ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಜಯಗಳಿಸುವಂತಾಗಬೇಕೆಂದರು.