ವೆಂಗಯ್ಯನ ಕೆರೆ ಏತ ನೀರಾವರಿ ರೈತರಿಗೆ ವರದಾನಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿ ಹಾಗೂ ಕಸಬಾ ಹೋಬಳಿಯ ಕೆರೆಗಳಿಗೆ ನೀರು ಹರಿಸುವ ವೆಂಗಯ್ಯನ ಕೆರೆ ಏತ ನೀರಾವರಿ ಯೋಜನೆಯ ಕಾಮಗಾರಿ ಅಂತಿಮ ಹಂತ ತಲುಪಿದ್ದು ಅಕ್ಟೋಬರ್ ಮಾಸಾಂತ್ಯಕ್ಕೆ ಮೊದಲ ಹಂತದ ಕಾಮಗಾರಿ ಉದ್ಘಾಟನೆ ಮಾಡುತ್ತೇವೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.