ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಬೆಳೆ ದಾಖಲಾದ್ರೆ ಮಾತ್ರ ಬರ ಪರಿಹಾರಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ-ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರ ವಿಸ್ತೀರ್ಣ ಹಾಗೂ ಬೆಳೆಯನ್ನು ಪ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯಾಪ್ರಭು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.