ಶಿವಮೊಗ್ಗದಲ್ಲಿ ಉತ್ತರ ಪ್ರದೇಶ ಮಾದರಿ ಹಿಂದು ಮಹಾಪಂಚಾಯ್ತಿ ಸಭೆ: ವಿಹಿಂಪಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಹಿಂದುಗಳ ಮೇಲೆ ಆಕ್ರಮಣಗಳಾದಾಗ ರಕ್ಷಣೆ ಹಾಗೂ ಒಗ್ಗಟ್ಟು ಪ್ರದರ್ಶನಕ್ಕೆ ಮಹಾಪಂಚಾಯ್ತಿ ನಡೆಸಿ ಹಿಂದು ರಕ್ಷಣೆಗೆ ಪ್ರಮುಖ ತೀರ್ಮಾನ ಕೈಗೊಳ್ಳಲಾಗುತ್ತದೆ. ಇದೇ ರೀತಿ ಶಿವಮೊಗ್ಗ ಘಟನೆ ಬಳಿಕ ಹಿಂದುಗಳ ರಕ್ಷಣೆ ಸಲುವಾಗಿ ಸಾಧು, ಸಂತರು, ಹಿಂದು ಸಮಾಜದ ಮುಖಂಡರು ಹಾಗೂ ಪ್ರಮುಖರನ್ನು ಕರೆದು ಮಹಾಪಂಚಾಯ್ತಿ ನಡೆಸಲು ವಿಹಿಂಪ ನಿರ್ದಾರ.