ಈ ಮಣ್ಣಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಮಣ್ಣಾಗ್ತೇನೆ: ಡಿಕೆಶಿರಾಮನಗರ: ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಮಣ್ಣಾಗುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.