ಜಿಲ್ಲೆಯಲ್ಲಿ ಸ್ಥಾಪಿಸಿದ ಸಹಾಯವಾಣಿ ಕೇಂದ್ರ ಸದ್ಬಳಕೆ ಮಾಡಿಕೊಳ್ಳಿಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರೈತರಿಗೆ ಬಿತ್ತನೆ ಬೀಜ ವಿತರಿಸಿದರು. ಊರ್ಡಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಂತರ ಕೇಂದ್ರದಲ್ಲಿ ದಾಸ್ತಾನು ಮಾಡಲಾಗಿದ್ದ ಕೃಷಿ ಪರಿಕರ ಹಾಗೂ ಬಿತ್ತನೆ ಬೀಜದ ದಾಸ್ತಾನನ್ನು ಪರಿಶೀಲಿಸಿದರು.