ಈ ಬಾರಿಯೂ ಮತದಾರರು ನನ್ನ ಕೈ ಬಿಡಲ್ಲಕನ್ನಡಪ್ರಭ ವಾರ್ತೆ ಚಿಕ್ಕೋಡಿ ಜನರ ಸಮಸ್ಯೆ ಆಲಿಸಿ, ಪರಿಹರಿಸುವುದು ನಮ್ಮ ಪ್ರಥಮ ಆಧ್ಯತೆಯಾಗಿದೆ ಎಂದು ಚಿಕ್ಕೋಡಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಯಕ್ಸಂಬಾ ಪಟ್ಟಣದಲ್ಲಿ ಭಾನುವಾರ ಜನಸಂಪರ್ಕ ಸಭೆ (ಜನತಾ ದರ್ಶನ) ಆಯೋಜಿಸಿ ಕ್ಷೇತ್ರದ ವಿವಿಧ ಕಡೆಯಿಂದ ಬಂದಿದ್ದ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು.