ನೆಮ್ಮದಿ ಪಡೆಯುವ ಏಕೈಕ ಮಾರ್ಗ ಧ್ಯಾನ: ಈರಣ್ಣ ಕಡಾಡಿಕನ್ನಡಪ್ರಭ ವಾರ್ತೆ ಘಟಪ್ರಭ: ದುಡ್ಡು ಕೊಟ್ಟು ಜಗತ್ತಿನಲ್ಲಿ ಏನೆಲ್ಲ ಕೊಳ್ಳಬಹುದು. ಆದರೆ, ನೆಮ್ಮದಿ ಮಾತ್ರ ಕೊಳ್ಳಲು ಸಾಧ್ಯವಿಲ್ಲ. ಅಂತಹ ನೆಮ್ಮದಿ ದೊರೆಯುವ ಏಕೈಕ ಮಾರ್ಗವೆಂದರೇ ಧ್ಯಾನ. ಆಧುನಿಕ ಯುಗದಲ್ಲಿ ಪಿರಮಿಡ್ ಆಧ್ಯಾತ್ಮಿಕ ಧ್ಯಾನ ಕೇಂದ್ರಗಳು ಮನುಷ್ಯನ ನೆಮ್ಮದಿಯ ಕೇಂದ್ರಗಳಾಗಲಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.