ಕಡಿಮೆ ಅಂಕ ನೀಡಿದ ಶಿಕ್ಷಕಿಯ ವಾಟರ್ ಬಾಟಲ್ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!ಶಾಲಾ ಯುನಿಟ್ ಟೆಸ್ಟ್ನ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಅಲ್ಲದೆ ಸರಿಯಿದ್ದ ಉತ್ತರಕ್ಕೆ ಶಿಕ್ಷಕಿ ತಪ್ಪು ಹಾಕಿದ್ದಾರೆ ಎನ್ನುವ ದ್ವೇಷವೂ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು. ಇದರ ಸೇಡು ತೀರಿಸಲು ತನ್ನ ಸ್ನೇಹಿತೆಯೊಬ್ಬಳ ಸಹಾಯ ಪಡೆದುಕೊಂಡ ವಿದ್ಯಾರ್ಥಿನಿ, ಸ್ಟಾಫ್ ರೂಮ್ನಲ್ಲಿ ಶಿಕ್ಷಕಿಯರಿಲ್ಲದ ಸಂದರ್ಭ ನೋಡಿಕೊಂಡು ಎಕ್ಸ್ಫೈರಿ ಆದಂತಹ ಮಾತ್ರೆಗಳನ್ನು ಶಿಕ್ಷಕಿಗೆ ಸೇರಿದ ವಾಟರ್ ಬಾಟಲಿಗೆ ಹಾಕಿದ್ದಾರೆ.