ಕನ್ನಡ ಸಾಹಿತ್ಯಕ್ಕೆ ಪ್ರಪಂಚ ಒಗ್ಗೂಡಿಸುವ ಶಕ್ತಿಕನ್ನಡ ಸಾಹಿತ್ಯ, ಸಂಗೀತಕ್ಕೆ ಪ್ರಪಂಚವನ್ನೇ ಒಗ್ಗೂಡಿಸುವ ಶಕ್ತಿ ಇದೆ. ಅಂತೆಯೇ ಕನ್ನಡ ನಾಡು, ನುಡಿ ಸಾಹಿತ್ಯ, ಸಂಗೀತ ಪರಂಪರೆ ವಿದೇಶದಲ್ಲಿಯೂ ಹಾಸು ಹೊಕ್ಕಾಗಿದೆ ಎನ್ನುವುದಕ್ಕೆ ಈ ಸಮ್ಮೇಳನವೇ ಸಾಕ್ಷಿ ಎಂದು ಅಥಣಿ ತಾಲೂಕಿನ ರಡ್ಡೇರಹಟ್ಟಿ ಸರ್ಕಾರಿ ಫ್ರೌಢಶಾಲೆಯ ಶಿಕ್ಷಕಿ, ಸಾಹಿತಿ ಡಾ.ಅರ್ಚನಾ ಅಥಣಿ ಹೇಳಿದರು.