ಪ್ರೊ. ಭಗವಾನ್ ಚಿಕ್ಕಮಗಳೂರು ಆಗಮನಕ್ಕೆ ಒಕ್ಕಲಿಗರ ವಿರೋಧನಿವೃತ್ತ ಪ್ರಾಧ್ಯಾಪಕ, ಹಿರಿಯ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಅವರು 20 ರಂದು ಚಿಕ್ಕಮಗಳೂರಿನಲ್ಲಿ ಏರ್ಪಡಿಸಲಾಗಿರುವ ಮಹಿಷ ದಸರಾ ಉತ್ಸವಕ್ಕೆ ಆಗಮಿಸುತ್ತಿದ್ದು, ಇದಕ್ಕೆ ಜಿಲ್ಲೆಯ ಒಕ್ಕಲಿಗ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿದೆ. ಒಕ್ಕಲಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ. ಕೆ.ಎಸ್. ಭಗವಾನ್ ಅವರು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸದಂತೆ ನಿರ್ಬಂಧ ಹೇರಬೇಕೆಂದು ಆಗ್ರಹಿಸಿ ಆಲ್ದೂರಿನಲ್ಲಿ ಒಕ್ಕಲಿಗ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು.