ಸಾರ್ವಜನಿಕ ಸ್ವಾಮ್ಯದ ಉದ್ದಿಮೆಗೆ ಶಕ್ತಿ ತುಂಬಿದ್ದೇ ಮೋದಿದೇಶಾದ್ಯಂತ ಬ್ರಿಟಿಷರ ಅವಧಿಯಲ್ಲಿ ಸ್ಥಾಪಿತವಾದ ದೊಡ್ಡ ದೊಡ್ಡ ಖಾಸಗಿ ಕಂಪನಿಗಳು, ಕಾರ್ಖಾನೆಗಳು ಮುಚ್ಚುವ ಹಂತಕ್ಕೆ ಬರಲು ಕಾಂಗ್ರೆಸ್ ಪ್ರಮುಖ ಕಾರಣ. ಕಾರ್ಮಿಕರಿಗೆ ಸಂಬಳ ಕೊಡಲೂ ಆಗದಂತೆ ನಷ್ಟದ ಹಾದಿಗೆ ತಂದ ಕೀರ್ತಿ ಕಾಂಗ್ರೆಸ್ ಸರ್ಕಾರಗಳಿಗೆ ಸಲ್ಲುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಟೀಕಿಸಿದ್ದಾರೆ.