ವಿಜೃಂಭಣೆಯಿಂದ ನಡೆದ ಶ್ರೀಬಡಗೂಡಮ್ಮದೇವಿ ಕೊಂಡೋತ್ಸವ, ರಥೋತ್ಸವಶ್ರೀಬಡಗೂಡಮ್ಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 1ರಂದು ಅಮ್ಮನವರಿಗೆ ಹೂವಿನಚಪ್ಪರ ಹಾಗೂ ಪಟ್ಟಣದ ಒಳಸುತ್ತಿನ ಮೆರವಣಿಗೆ ನಡೆಯಿತು. ಮೇ 2ರ ಗುರುವಾರ ಹತ್ತು ಹಳ್ಳಿಗಳ ಗ್ರಾಮಸ್ಥರಿಂದ ಇಡೀರಾತ್ರಿ ರಂಗಕುಣಿತ, ಪೂಜಾ ಕಾರ್ಯಗಳು ನೆರವೇರಿದವು. ಮೇ 3ರ ಶುಕ್ರವಾರ ಬೆಳಗಿನಿಂದ ಸಂಜೆವರೆಗೆ ಅಲಂಕಾರಭೂಷಿತಳಾದ ಶ್ರೀ ಬಡಗೂಡಮ್ಮದೇವಿಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು.