ಬಿಜೆಪಿಯದ್ದು ಸುಳ್ಳಿನ ಮೇಲಿನ ಸಾಮ್ರಾಜ್ಯಕನ್ನಡಪ್ರಭ ವಾರ್ತೆ ವಿಜಯಪುರ: ಬಿಜೆಪಿ, ಮೋದಿ ಮತ್ತವರ ಬಳಗದ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ. ಬಿಜೆಪಿಯವರು ಸುಳ್ಳಿನ ಮೇಲೆ ಸಾಮ್ರಾಜ್ಯ ಕಟ್ಟುತ್ತಾರೆ. ಇಲ್ಲದ್ದನ್ನು ಅಚ್ಚುಕಟ್ಟಾಗಿ ಸೃಷ್ಟಿಸುತ್ತಾರೆ. ಭ್ರಮೆಗಳನ್ನು ಬಿತ್ತಿ ಮುಗ್ಧ ಜನರ ಮತ ಕೇಳುತ್ತಾರೆ. ಇದರಿಂದ ಬೇಸತ್ತು ನಾವು ಬಿಜೆಪಿ ತೊರೆಯಬೇಕಾಯಿತು ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು.