ಕಲಬುರಗಿಗೆ ಕೇಂದ್ರ ಚೊಂಬು ಕೊಟ್ಟಿದೆ
- ನಮ್ಮ ಗ್ಯಾರಂಟಿ ಯೋಜನೆಗಳು ನನ್ನ ಕೈ ಹಿಡಿಯಲಿವೆ
- ಕಲಬುರಗಿ ಅಭಿವೃದ್ಧಿಯಲ್ಲಿ 20 ವರ್ಷ ಹಿಂದೆ ಹೋಗಲು ಕೇಂದ್ರದ ಧೋರಣೆಯೇ ಕಾರಣ
- ಜನ ನನ್ನ ಹರಸುವ ಮೂಲಕ ಖರ್ಗೆಯವರ ಕೈ ಬಲಪಡಿಸಬೇಕು
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಸಂತ್ರಸ್ತೆಯಿಂದ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಲೈಂಗಿಕ ಹಗರಣದ ಆರೋಪಿ ಹಾಗೂ ಜನತಾ ದಳ (ಜಾತ್ಯತೀತ) ಸಂಸದ ಪ್ರಜ್ವಲ್ ರೇವಣ್ಣ ಅವರು, ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ಪ್ರಯಾಣಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಗೊಳಗಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಶುಕ್ರವಾರ ನಡೆಯಲಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋಗಳಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಹರಸಾಹಸ ಪಡುತ್ತಿದ್ದು, ಭೇಟಿ ಮಾಡಲು ಯತ್ನಿಸಿದ ವೇಳೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ತಿಳಿದು ಬಂದಿದೆ.