ಒಳಮೀಸಲು ವರ್ಗೀಕರಣ ವಿರೋಧಿಸಿ ರಸ್ತೆತಡೆಒಳಮೀಸಲಾತಿ ವರ್ಗೀಕರಣ ವಿರೋಧಿಸಿ ಸೆ.12ರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಗುರುವಾರ 7ನೇ ದಿನಕ್ಕೆ ಕಾಲಿಟ್ಟಿದ್ದು, ಶಿವಮೂರ್ತಿ ವೃತ್ತದಲ್ಲಿ ರಸ್ತೆತಡೆ ನಡೆಸಿ, ಸರ್ಕಾರದ ಶವವನ್ನು ಇಟ್ಟು ಪ್ರತಿಭಟಿಸಿದರು.