ಆರ್ಥಿಕ ಪ್ರಗತಿಗೆ ಕಾರ್ಮಿಕರ ಕೊಡುಗೆ ಅಪಾರಚನ್ನಪಟ್ಟಣ: ಆರ್ಥಿಕ ಪ್ರಗತಿಗೆ ಶ್ರಮಿಕ ವರ್ಗವಾಗಿರುವ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಆದರೆ, ಸರ್ಕಾರಗಳಿಂದ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ಸಿಗದ ಕಾರಣ ಕಾರ್ಮಿಕರು ಸಂಕಷ್ಟ ಅನುಭವಿಸುವಂತಾಗಿದೆ. ತಮ್ಮ ಸಮಲತ್ತುಗಳನ್ನು ಪಡೆಯುವ ನಿಟ್ಟಿನಲ್ಲಿ ಕಾರ್ಮಿಕರು ಸಂಘಟಿತರಾಗುವ ಅಗತ್ಯವಿದೆ ಎಂದು ಟೋಯೋಟಾ ಸಂಸ್ಥೆಯ ಪಿ. ಶ್ರೀಕಾಂತ್ ತಿಳಿಸಿದರು.