ಸಂಯುಕ್ತಾ ಪರ ಸಿಎಂ, ಡಿಸಿಎಂ ಭರ್ಜರಿ ಮತಬೇಟೆಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು, ನಾಯಕರು ಮತಯಾಚನೆ ಮಾಡಿದರು. ನಗರದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ-2 ಯಾತ್ರೆಯಲ್ಲಿ ಮಾತನಾಡಿದ ನಾಯಕರು ನಾಯಕಿ ಸಂಯುಕ್ತಾ ಪಾಟೀಲ ಅವರನ್ನು ಗೆಲ್ಲಿಸಿ ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಎಲ್ಲರೂ ಮನವಿ ಮಾಡಿದರು.