ಕ್ಷೇತ್ರದಲ್ಲಿ 300ಕ್ಕೂ ಹೆಚ್ಚು ಗ್ರಾಮಗಳಿಗೆ ಇಂದಿಗೂ ಬಸ್ಸಿಲ್ಲ!ದಾವಣಗೆರೆ ಕ್ಷೇತ್ರದ ಸುಮಾರು 300ಕ್ಕೂ ಹೆಚ್ಚು ಹಳ್ಳಿಗಳಿಗೆ ಇಂದಿಗೂ ಬಸ್ಸುಗಳ ಸೇವೆಯೇ ಇಲ್ಲ. 3 ದಶಕಗಳ ಕಾಲ ಅಧಿಕಾರ ಅನುಭವಿಸಿದವರು, ಜಿಲ್ಲೆ ಆಡಳಿತ ಚುಕ್ಕಾಣಿ ಹಿಡಿದವರು ಏಕೆ ಬಸ್ಸು ಸೌಕರ್ಯ ಕಲ್ಪಿಸಿಲ್ಲವೆಂದು ಜನತೆ ಕೇಳಬೇಕು ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.