ಇವಿಎಂ ಭದ್ರತಾ ಕೊಠಡಿ ಪರಿಶೀಲಿಸಿದ ಡಿಸಿದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಜೂ.4ರಂದು ಬೆಳಗ್ಗೆ 8ರಿಂದ ತಾಲೂಕಿನ ತೋಳಹುಣಸೆ ಗ್ರಾಮದ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಹಿನ್ನೆಲೆ ಇವಿಎಂ ಭದ್ರತಾ ಕೊಠಡಿ ಹಾಗೂ ಮತ ಎಣಿಕೆ ಕೇಂದ್ರದ ಸಿದ್ಧತೆಯನ್ನು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ ಪರಿಶೀಲಿಸಿದರು.