ಕಾಂಗ್ರೆಸ್‌ಗೆ ಲಕ್ಷಕ್ಕೂ ಅಧಿಕ ಅಂತರದ ಜಯ: ಹರೀಶ್‌ಕುಮಾರ್ ಭವಿಷ್ಯಈ ಬಾರಿ ಒಳ್ಳೆಯ ಚುನಾವಣೆಯನ್ನು ಎದುರಿಸಿದ್ದೇವೆ ಎಂಬ ಸಂತೃಪ್ತಿ ಇದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. 2ನೇ ಹಂತದಲ್ಲೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ. ಪಕ್ಷದ ಗ್ಯಾರಂಟಿ ಯೋಜನೆಗಳು, ಜನಪರ ಆಡಳಿತಕ್ಕೆ ಜನ ಮನ್ನಣೆ ನೀಡಿದ್ದಾರೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.