ಪ್ರತಿಭೆ, ಜ್ಞಾನ, ಆಸಕ್ತಿ ಇದ್ದರೆ ಉನ್ನತ ಸ್ಥಾನ: ಸಾಹಿತಿಮಕ್ಕಳಿಗೆ ಓದುವ, ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಥೆ ಪುಸ್ತಕಗಳನ್ನು ನೀಡುವ ಮೂಲಕ ಅವರಿಗೆ ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಮಕ್ಕಳು ಆಸಕ್ತಿಯಿಂದ ಅಭ್ಯಾಸ ಮಾಡುವ ಮೂಲಕ ತಂದೆ- ತಾಯಿಗೆ, ನಾಡಿಗೆ ಕೀರ್ತಿ ತರುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆ ಮಕ್ಕಳಿಗೆ ಉತ್ತಮ ಹಾಗೂ ಸ್ಪರ್ಧಾತ್ಮಕ ಯುಗಕ್ಕೆ ಅಗತ್ಯವಾದ ಶಿಕ್ಷಣ ಒದಗಿಸಲು ಶ್ರಮಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.