ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಶೇ.70.62 ಮತದಾನಎಂದಿನಂತೆ ಗ್ರಾಮಾಂತರ ಪ್ರದೇಶದಲ್ಲೇ ಹೆಚ್ಚು ಮತದಾನ ಆಗಿದ್ದು, ನಗರ ಪ್ರದೇಶದಲ್ಲಿ ಕಡಿಮೆ ಮತದಾನ ಪ್ರಮಾಣ ಕಡಿಮೆ ಆಗಿದೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.80.19 ಮತದಾನ ಆಗಿದೆ. ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60.87 ಮತದಾನದೊಂದಿಗೆ ಕೊನೆಯ ಸ್ಥಾನದಲ್ಲಿದೆ.